ಸಾರಾಂಶ
ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಕಾಂಗ್ರೆಸ್ ರಾಜ್ಯದ 9 ಲೋಕಸಭಾ ಕ್ಷೇತ್ರಗಳು ಮತ್ತು ಪುದುಚೆರಿಯ ಏಕೈಕ ಲೋಕಸಭಾ ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ.
ಚೆನ್ನೈ: ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಕಾಂಗ್ರೆಸ್ ರಾಜ್ಯದ 9 ಲೋಕಸಭಾ ಕ್ಷೇತ್ರಗಳು ಮತ್ತು ಪುದುಚೆರಿಯ ಏಕೈಕ ಲೋಕಸಭಾ ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ.
ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ‘ತಮಿಳುನಾಡು ಮತ್ತು ಪುದುಚೆರಿಯಲ್ಲಿ ಕಾಂಗ್ರೆಸ್ 10 ಕಡೆ ಸ್ಪರ್ಧಿಸಲಿದ್ದು, ಉಳಿದ 30 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಡಿಎಂಕೆ, ಡಿಎಂಡಿಕೆ ಮುಂತಾದವರ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ’ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಕಳೆದ ಬಾರಿಯೂ ತಮಿಳುನಾಡು ಮತ್ತು ಪುದುಚೆರಿಯಲ್ಲಿ 10 ಸ್ಥಾನ ನೀಡಲಾಗಿತ್ತು.