ಸಾರಾಂಶ
ನವದೆಹಲಿ: ರಾಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್, ಸಫ್ದರ್‌ಜಂಗ್ ಆಸ್ಪತ್ರೆ ಸೇರಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ 4 ಆಸ್ಪತ್ರೆಗಳಿಗೆ ಗಂಭೀರ ಚಿಕಿತ್ಸಾ ವಿಭಾಗ ಹೊರತುಪಡಿಸಿ ಮಿಕ್ಕ ಹಲವು ವಿಭಾಗ ಗಳಿಗೆ ಜ.22ರಂದು ರಜೆ ಘೋಷಣೆ ಮಾಡಲಾಗಿದೆ.
ಆಸ್ಪತ್ರೆಗೆ ರಜೆ ಘೋಷಣೆ ಮಾಡುವುದು ಸರಿಯಲ್ಲ ಎಂದು ಹಲವರು ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಿದೆ.
ಹೀಗಾಗಿ ಆಸ್ಪತ್ರೆಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗಂಭೀರ ಆರೋಗ್ಯ ಸೇವೆ ಗಳಿಗೆ ಯಾವುದೇ ರಜೆ ಇಲ್ಲ ಎಂದು ಸಹ ತಿಳಿಸಲಾಗಿದೆ.
ಪ್ರಾಣ ಪ್ರತಿಷ್ಠಾಪನೆ: ದಿಲ್ಲಿಯಲ್ಲೂ ಅರ್ಧ ದಿನ ರಜೆ
ಅಯೋಧ್ಯೆಯಲ್ಲಿ ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಲುವಾಗಿ ಇಲ್ಲಿನ ಸರ್ಕಾರಿ ಕಚೇರಿಗಳಿಗೆ ಉಪ ರಾಜ್ಯಪಾಲ ವಿ.ಕೆ. ಸಕ್ಸೇನಾ ಅರ್ಧದಿನ ರಜೆ ಘೋಷಿಸಿದ್ದಾರೆ.
ಜೊತೆಗೆ ಈ ದಿನದಂದು ಮಾಂಸದ ಅಂಗಡಿ ಸಂಘದವರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಲಿದ್ದೇವೆ ಎಂದು ಘೋಷಿಸಿವೆ.
ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ನೆರವೇರುವ ಘಳಿಗೆಯನ್ನು ದೆಹಲಿ ಸರ್ಕಾರಿ ಅಧಿಕಾರಿಗಳು, ನೌಕರರು ಕಣ್ತುಂಬಿಕೊಳ್ಳಲಿ ಎಂದು ಉಪ ರಾಜ್ಯಪಾಲ ವಿ.ಕೆ. ಸಕ್ಸೇನಾ ಅರ್ಧದಿನ ರಜೆಗೆ ಅನುಮೋದನೆ ನೀಡಿದ್ದಾರೆ.
ಮತ್ತೊಂದೆಡೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಧ್ಯಾಹ್ನ 2:30ರವರೆಗೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.