ಸಾರಾಂಶ
ಮಧ್ಯಪ್ರದೇಶದ ಛಿಂದ್ವಾಡದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮೃತ ಮಕ್ಕಳ ಸಂಖ್ಯೆ 16ಕ್ಕೇರಿಕೆ
ಪಂಜಾಬ್‌ನಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧಪಿಟಿಐ ಛಿಂದ್ವಾಡ ಮಧ್ಯಪ್ರದೇಶದ ಛಿಂದ್ವಾಡದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.ಇದಕ್ಕೂ ಮೊದಲು, ಚಿಂದ್ವಾರದ 14 ಮಕ್ಕಳು ಕೆಮ್ಮಿನ ಸಿರಪ್ ಕೋಲ್ಡ್ರಿಫ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿತ್ತು, ಅದರ ಮಾದರಿಗಳಲ್ಲಿ ವಿಷಕಾರಿ ಅಂಶ ಇರುವುದು ಕಂಡುಬಂದಿತ್ತು. ಛಿಂದ್ವಾಡದ ಇನ್ನೂ 6 ಮಕ್ಕಳು ನಾಗ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಐದು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಹೆಚ್ಚುವರಿ ಕಲೆಕ್ಟರ್ ತಿಳಿಸಿದ್ದಾರೆ.ಖರ್ಚು ಸರ್ಕಾರಕ್ಕೇ ಬಳಕೆ:ದೋಷಪೂರಿತ ಸಿರಪ್ ಸೇವನೆಯಿಂದಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ.
ಉತ್ಪಾದಕ ಕಂಪನಿಗೆ ನೋಟಿಸ್:ಅತ್ತ ಕೋಲ್ಡ್ರಿಫ್‌ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್ ನೋಟಿಸ್ ನೀಡಿದೆ.ಪಂಜಾಬಲ್ಲೂ ನಿಷೇಧ:
ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಕೋಲ್ಡ್ರಿಫ್ ನಿಷೇಧಿಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆಸುಪ್ರೀಂಗೆ ಅರ್ಜಿ:
ಸಿರಪ್ ಸೇವಿಸಿ ಮಕ್ಕಳು ಮೃತರಾದ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಆಗಿದೆ.