ಸಾರಾಂಶ
ಸಂದೇಶಖಾಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಕಲ್ಕತ್ತಾ : ಸಂದೇಶಖಾಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅದು ವಜಾಗೊಳಿಸಿದೆ.
ಭೂ ಕಬಳಿಕೆ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿಯ ಉಚ್ಛಾಟಿತ ನಾಯಕ ಶೇಖ್ ಶಹಜಹಾನ್ ವಿರುದ್ಧ ಕಲ್ಕತ್ತಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾ| ಬಿ.ಆರ್.ಗವಾಯಿ ಹಾಗೂ ನ್ಯಾ|ಕೆ.ವಿ.ವಿಶ್ವನಾಥನ್ ಪೀಠ, ‘ವ್ಯಕ್ತಿಯನ್ನು ರಕ್ಷಿಸುವ ಪ್ರಯತ್ನಗಳು ಏಕೆ ನಡೆಯುತ್ತಿವೆ’ ಎಂದು ಚಾಟಿ ಬೀಸಿದೆ.
ಪಡಿತರ ವಿತರಣೆ ಅಕ್ರಮದ ತನಿಖೆ ನಡೆಸಲು ಶಹಜಹಾನ್ ನಿವಾಸಕ್ಕೆ ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದರು ಈ ಪ್ರಕರಣ ಸಂಬಂಧ ಶೇಖ್‌ನನ್ನು ಫೆ.29ರಂದು ಬಂಧಿಸಲಾಗಿತ್ತು.