ಸಾರಾಂಶ
ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಸೋಮವಾರ 180 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2804ಕ್ಕೆ ಇಳಿದಿದೆ.
ನವದೆಹಲಿ: ದೇಶದಲ್ಲಿ ಕೋವಿಡ್ ಭಾರಿ ಇಳಿಕೆ ಕಂಡಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 180 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.
ಸೋಂಕಿಗೆ 3 ಜನರು ಸಾವನ್ನಪ್ಪಿದ್ದಾರೆ.ಸಕ್ರಿಯ ಪ್ರಕರಣಗಳ ಪ್ರಮಾಣವು 2804ಕ್ಕೆ ಇಳಿದಿದೆ.
ಈ ಸಕ್ರಿಯ ಪ್ರಕರಣಗಳಲ್ಲಿ ಶೇ.92ರಷ್ಟು ಜನರು ಮನೆಯಲ್ಲೇ ಇದ್ದು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ದೇಶದಲ್ಲಿ ಈವರೆಗೂ 4.50 ಕೋಟಿ ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ 4.44 ಕೋಟಿ ಮಂದಿ ಗುಣಮುಖರಾಗಿದ್ದಾರೆ ಹಾಗೂ 5.30 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.
ಈವರೆಗೂ 220.67 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ.