ಸಾರಾಂಶ
ಗಡಿಯಲ್ಲಿ ಭಾರತದೊಂದಿಗೆ ಸದಾ ಕ್ಯಾತೆ ತೆಗೆಯುವ ಚೀನಾ, ಇದೀಗ ಲಡಾಖ್‌ಗೆ ಹೊಂದಿಕೊಂಡಂತೆ ಇರುವ ಆಕ್ರಮಿತ ಹೋಟಾನ್ ಜಿಲ್ಲೆಯಲ್ಲಿ ಎರಡು ಹೊಸ ಕೌಂಟಿ (ಮುನ್ಸಿಪಲ್) ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಕೌಂಟಿಗಳನ್ನು ‘ಹಿಯಾನ್’ ಹಾಗೂ ‘ಹೆಕಾಂಗ್’ ಎಂದು ಹೆಸರಿಸಿದೆ.
ನವದೆಹಲಿ: ಗಡಿಯಲ್ಲಿ ಭಾರತದೊಂದಿಗೆ ಸದಾ ಕ್ಯಾತೆ ತೆಗೆಯುವ ಚೀನಾ, ಇದೀಗ ಲಡಾಖ್‌ಗೆ ಹೊಂದಿಕೊಂಡಂತೆ ಇರುವ ಆಕ್ರಮಿತ ಹೋಟಾನ್ ಜಿಲ್ಲೆಯಲ್ಲಿ ಎರಡು ಹೊಸ ಕೌಂಟಿ (ಮುನ್ಸಿಪಲ್) ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಕೌಂಟಿಗಳನ್ನು ‘ಹಿಯಾನ್’ ಹಾಗೂ ‘ಹೆಕಾಂಗ್’ ಎಂದು ಹೆಸರಿಸಿದೆ.
ಚೀನಾದ ಈ ನಡೆಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, ‘ಚೀನಾವು ನಮ್ಮ ಭೂಭಾಗವನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವುದನ್ನು ಭಾರತ ಎಂದೂ ಒಪ್ಪಿಲ್ಲ. ಚೀನಾ, ಹೋಟಾನ್ ಪ್ರಾಂತ್ಯದಲ್ಲಿ ರಚಿಸಲು ಹೊರಟಿರುವ 2 ಕೌಂಟಿಯ ಕೆಲ ಭಾಗಗಳು ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್‌ನಲ್ಲಿವೆ’ ಎಂದಿದ್ದಾರೆ. ‘ಹೊಸ ಪ್ರಾಂತ್ಯಗಳನ್ನು ರಚಿಸುವ ಮೂಲಕ ಚೀನಾ ಭಾರತದ ಸಾರ್ವಭೌಮತ್ವದ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಿಲ್ಲ. ಚೀನಾದ ಅಕ್ರಮ ಹಾಗೂ ಬಲವಂತದ ಅತಿಕ್ರಮಣಕ್ಕೆ ಭಾರತ ಮಾನ್ಯತೆ ನೀಡುವುದಿಲ್ಲ. ಈ ಸಂಬಂಧ ನಮ್ಮ ವಿರೋಧವನ್ನು ರಾಜತಾಂತ್ರಿಕ ಮಾಧ್ಯಮಗಳ ಮೂಲಕ ಚೀನಾಗೂ ತಿಳಿಸಲಾಗಿದೆ’ ಎಂದು ಜೈಸ್ವಾಲ್ ಹೇಳಿದರು.
1962ರಲ್ಲಿ ಭಾರತದ ಮೇಲೆ ದಾಳಿ ಮಾಡಿದ್ದ ಚೀನಾ ಆಗ ಅಕ್ಸಾನ್‌ಚಿನ್ ಒಳಗೊಂಡಂತ ಲಡಾಖ್‌ನ ಹಲವು ಭಾಗಗಳನ್ನು ಅತಿಕ್ರಮಿಸಿತ್ತು.