: ಅರ್ನಬ್‌ ಮತ್ತು ಮುರುಸು ಬಳಿಕ ಇದೀಗ ‘ಅಕ್ವನ್‌’ (ದುಷ್ಟಶಕ್ತಿ) ಹೆಸರಿನ ಚಂಡಮಾರುತ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಸೋಮವಾರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ

ಅಮರಾವತಿ: ಅರ್ನಬ್‌ ಮತ್ತು ಮುರುಸು ಬಳಿಕ ಇದೀಗ ‘ಅಕ್ವನ್‌’ (ದುಷ್ಟಶಕ್ತಿ) ಹೆಸರಿನ ಚಂಡಮಾರುತ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಸೋಮವಾರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ಎಚ್ಚರಿಕೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತಕ್ಕೆ ಪೂರಕವಾದ ವಾತಾವರಣ

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಇದು ಸೋಮವಾರ ಚಂಡಮಾರುತವಾಗಿ ಪರಿವರ್ತನೆಗೊಂಡು, ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ.

80 ಕಿ.ಮೀ. ವೇಗದ ಬಿರುಗಾಳಿ

ನ.17ರಿಂದ ಮುಂದಿನ 2 ದಿನಗಳವರೆಗೆ, ಗಂಟೆಗೆ 80 ಕಿ.ಮೀ. ವೇಗದ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಸಮುದ್ರದ ಪ್ರಕ್ಷುಬ್ಧ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸೋಮವಾರದೊಳಗೆ ತೀರಕ್ಕೆ ಮರಳುವಂತೆ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಅಲ್ಲದೆ, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.