ಸೋನಿಯಾ ಜತೆ ದಾನಿಶ್‌ ಅಲಿ ಭೇಟಿ: ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

| Published : Mar 15 2024, 01:21 AM IST

ಸೋನಿಯಾ ಜತೆ ದಾನಿಶ್‌ ಅಲಿ ಭೇಟಿ: ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ
Share this Article
  • FB
  • TW
  • Linkdin
  • Email

ಸಾರಾಂಶ

ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿರುವ ಸಂಸದ ದಾನಿಶ್‌ ಅಲಿ ಗುರುವಾರ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.

ನವದೆಹಲಿ: ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿರುವ ಸಂಸದ ದಾನಿಶ್‌ ಅಲಿ ಗುರುವಾರ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ದಾನಿಶ್‌ ಅಲಿ ಉತ್ತರ ಪ್ರದೇಶದ ಅಮ್ರೋಹ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ನ.10, ಜನಪಥ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಅಲಿ, ಸೋನಿಯಾ ಅವರ ಆಶೀರ್ವಾದ ಪಡೆದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನನ್ನ 2ನೇ ಲೋಕಸಭೆ ಚುನಾವಣೆಗೆ ತ್ಯಾಗಮಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ’ ಎಂದು ಪೋಸ್ಟ್‌ ಮಾಡಿದ್ದಾರೆ.