ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ.

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವಾರ್ಷಿಕ ಸಭೆಯಲ್ಲಿ ಹೊಸಬಾಳೆ ಅವರನ್ನು ಸಕಾರ್ಯವಾಹ (ಕಾರ್ಯದರ್ಶಿ) ಆಗಿ 2024-2027ರ ಅವಧಿಗೆ ಮತ್ತೆ ಆಯ್ಕೆ ಮಾಡಲಾಗಿದೆ ಎಂದು ಆರ್‌ಎಸ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ. ಹೊಸಬಾಳೆ ಅವರು ಈಗಾಗಲೇ 2021ರಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.