ಮೂರು ವರ್ಷದಲ್ಲಿ ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್‌ ರೋಗಿಗಳ ಆರೈಕೆ ಮಾಡಲು ಡೇ ಕೇರ್‌ ಕೇಂದ್ರ

| N/A | Published : Feb 02 2025, 05:45 AM IST

hospital
ಮೂರು ವರ್ಷದಲ್ಲಿ ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್‌ ರೋಗಿಗಳ ಆರೈಕೆ ಮಾಡಲು ಡೇ ಕೇರ್‌ ಕೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಇನ್ನು ಮೂರು ವರ್ಷದಲ್ಲಿ ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್‌ ರೋಗಿಗಳನ್ನು ಆರೈಕೆ ಮಾಡಲು ಡೇ ಕೇರ್‌ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನವದೆಹಲಿ :  ಇನ್ನು ಮೂರು ವರ್ಷದಲ್ಲಿ ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್‌ ರೋಗಿಗಳನ್ನು ಆರೈಕೆ ಮಾಡಲು ಡೇ ಕೇರ್‌ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಇದರಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲೇ ಆರಂಭಿಸಲು ಯೋಜಿಸಲಾಗಿದೆ. ಕ್ಯಾನ್ಸರ್‌ ರೋಗಿಗಳು, ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರು, ಸುದೀರ್ಘ ಕಾಯಿಲೆಯ ರೋಗಿಗಳನ್ನು ಆರೈಕೆ ಮಾಡಲಾಗುತ್ತದೆ.ಅಲ್ಲದೆ ಪ್ರಸ್ತುತ ಸಾಲಿನಲ್ಲಿ 10 ಸಾವಿರ ಹೆಚ್ಚುವರಿ ಸೀಟುಗಳನ್ನು ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಿಸಲಾಗುತ್ತದೆ. ಇನ್ನು 5 ವರ್ಷದಲ್ಲಿ ದೇಶದ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ 75 ಸಾವಿರ ಸೀಟುಗಳನ್ನು ಹೆಚ್ಚಿಸುವ ಗುರಿಯ ಭಾಗವಾಗಿದೆ. ಇದರ ಭಾಗವಾಗಿ ಈ ವರ್ಷ 10 ಸಾವಿರ ಸೀಟುಗಳನ್ನು ನೀಡಲಾಗುತ್ತಿದೆ. ಕಳೆದ 10 ವರ್ಷದಲ್ಲಿ 1.10 ಲಕ್ಷ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗಿದೆ. ಇದು ಶೇ.130 ರಷ್ಟು ಹೆಚ್ಚಳವಾದಂತಾಗಿದೆ.

ಇಷ್ಟೇ ಅಲ್ಲದೆ ಆರೋಗ್ಯ ಪ್ರವಾಸದ ಭಾಗವಾಗಿ ಹೀಲ್‌ ಇನ್‌ ಇಂಡಿಯಾದ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ನಿರ್ಧರಿಸಲಾಗಿದೆ. ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಯೋಜನೆಗೆ ಮತ್ತಷ್ಟು ಪ್ರಚಾರ ನೀಡಲು ತೀರ್ಮಾನಿಸಲಾಗಿದೆ.ಅಲ್ಲದೆ ಗಿಗ್‌ ಕೆಲಸಗಾರರಿಗೂ (ಉದಾಹರಣೆಗೆ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್‌) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅಡಿಯಲ್ಲಿ ಆರೋಗ್ಯ ಸೇವೆ ಒದಗಿಸಲು ಯೋಜಿಸಲಾಗಿದೆ. ಇದರಿಂದ 1 ಕೋಟಿ ಜನರಿಗೆ ಅನುಕೂಲ ಆಗುವ ಸಾಧ್ಯತೆಗಳಿವೆ.