ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೊತೆಗೆ ಈಗಾಗಲೇ ಫೆಂಗಲ್‌ ಎಂದು ಹೆಸರಿಡಲಾಗಿರುವ ಚಂಡಮಾರುತವು ನ.30ರ ಮಧ್ಯಾಹ್ನದ ವೇಳೆಗೆ ಪುದುಚೇರಿ ಮೇಲೆ ಅಪ್ಪಳಿಸಲಿದೆ. ಈ ವೇಳೆ ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕ್ರಮೇಣ ಚಂಡಮಾರುತ ತನ್ನ ಪ್ರಭಾವ ಕಳೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಫೆಂಗಲ್‌ ಪರಿಣಾಮ ಕಳೆದ 3 ದಿನಗಳಿಂದಲೂ ತಮಿಳುನಾಡು, ಆಂಧ್ರದ ಕರಾವಳಿ, ಕೇರಳ ಮತ್ತು ಪುದುಚೇರಿಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಶುಕ್ರವಾರವೂ ಅದು ಮುಂದುವರೆದಿದೆ. ಕೇರಳ, ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಡಿ.1 ಮತ್ತು ಡಿ.2ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.