ಸಾರಾಂಶ
ಸಚಿವ ರಾಜನಾಥ್ ಸಿಂಗ್ ಮತ್ತು ಭಾರತದ ಸಶಸ್ತ್ರ ಪಡೆಗಳ ಮುಖ್ಯಸ್ಥರು ಸಂಯಮದಿಂದ ಇರುವ ಮತ್ತು ಹಸನ್ಮುಖಿಗಳಾಗಿರುವ ಚಿತ್ರವೊಂದು ವೈರಲ್ ಆಗಿದೆ. ಇದು ಸವಾಲಿನ ಸಂದರ್ಭದಲ್ಲೂ ಇವರು ಆತ್ಮವಿಶ್ವಾಸ ಪ್ರದರ್ಶಿಸಿದ ಸಂಕೇತವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಉನ್ನತ ಮಟ್ಟದ, ರಹಸ್ಯ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭಾರತದ ಸಶಸ್ತ್ರ ಪಡೆಗಳ ಮುಖ್ಯಸ್ಥರು ಸಂಯಮದಿಂದ ಇರುವ ಮತ್ತು ಹಸನ್ಮುಖಿಗಳಾಗಿರುವ ಚಿತ್ರವೊಂದು ವೈರಲ್ ಆಗಿದೆ. ಇದು ಸವಾಲಿನ ಸಂದರ್ಭದಲ್ಲೂ ಇವರು ಆತ್ಮವಿಶ್ವಾಸ ಪ್ರದರ್ಶಿಸಿದ ಸಂಕೇತವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಪಾಕಿಸ್ತಾನವು ಭಾರತದ ಪಶ್ಚಿಮ ಗಡಿಯಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಅಲೆಯನ್ನು ಪ್ರಾರಂಭಿಸಿದ 24 ಗಂಟೆಗಳ ಒಳಗೆ ರಾಜನಾಥ್ ಅವರು ಶುಕ್ರವಾರ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಜತೆ ಸಭೆ ನಡೆಸಿದ್ದಾರೆ.
ಪಾಕಿಸ್ತಾನದಿಂದ ಅಪ್ರಚೋದಿತ ಆಕ್ರಮಣದ ರಾತ್ರಿಯ ಹೊರತಾಗಿಯೂ, ಈ ಚಿತ್ರದಲ್ಲಿ ರಾಜನಾಥ್ ಹಾಗೂ ಸೇನಾ ಪ್ರಮುಖರು ಹಸನ್ಮುಖಿಗಳಾಗಿದ್ದರು. ಇದು ಭಾರತದ ದೃಢನಿಶ್ಚಯ, ನಿಯಂತ್ರಣ ಮತ್ತು ಅಚಲ ನಿಲುವಿನ ಸಂಕೇತವಾಗಿದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ವಿಶ್ಲೇಷಿಸಲಾಗಿದೆ.