ಸಾರಾಂಶ
ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದ್ದು, ಫೆ.5ರ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ಆದ್ಮಿ ಪಕ್ಷ ಕೆಳಗಿಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಸೆಣಸಾಟ ನಡೆಸಿದೆ.
ನವದೆಹಲಿ: ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದ್ದು, ಫೆ.5ರ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ಆದ್ಮಿ ಪಕ್ಷ ಕೆಳಗಿಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಸೆಣಸಾಟ ನಡೆಸಿದೆ.
ರಾಜ್ಯದ 70 ಸ್ಥಾನ ಗೆಲ್ಲಲು ಈ ಬಾರಿ ಆಪ್, ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಪ್ರಮಾಣದ ಭರವಸೆಗಳ ಸುರಿಮಳೆಗೈದಿವೆ. ರಾಜ್ಯದ 1.56 ಕೋಟಿ ಮತದಾರರ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಫೆ.8ರಂದು ಬಹಿರಂಗವಾಗಲಿದೆ. ಹ್ಯಾಟ್ರಿಕ್ ಕನಸಿನಲ್ಲಿರುವ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಬಾರಿ ಆಪ್ 55 ಸ್ಥಾನ ಗೆಲ್ಲುವುದು ಖಚಿತ ಎಂದಿದ್ದಾರೆ. ಇನ್ನೊಂದೆಡೆ ಬಿಜೆಪಿ 27 ವರ್ಷಗಳ ಬಳಿಕ ಅಧಿಕಾರಕ್ಕೆ ಮರಳುವ ಭರವಸೆ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್ ಕೂಡಾ ಅಧಿಕಾರಕ್ಕೆ ಮರಳುವ ಆಶಯದಲ್ಲಿದೆ.ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್, ಹಾಲಿ ಸಿಎಂ ಆತಿಷಿ, ಬಿಜೆಪಿಯ ಮಾಜಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಬಿಜೆಪಿ ಮಾಜಿ ಸಂಸದ ರಮೇಶ್ ಬಿಧೂರಿ ಮೊದಲಾದವರು ಸೇರಿದ್ದಾರೆ.