ಬೆಂಗಳೂರು ಸ್ಫೋಟ: ದಿಲ್ಲಿಯಲ್ಲಿ ಪೊಲೀಸರ ಕಟ್ಟೆಚ್ಚರ

| Published : Mar 03 2024, 01:32 AM IST

ಸಾರಾಂಶ

ಬೆಂಗಳೂರಿನ ಹೊಟೆಲ್‌ ಒಂದರಲ್ಲಿ ಬಾಂಬ್‌ ಸ್ಫೋಟವಾದ ಬೆನ್ನಲ್ಲೇ ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್‌ ಸ್ಫೋಟ ಸಂಭವಿಸಿದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಶನಿವಾರ ಈ ಕುರಿತು ದೆಹಲಿಯ ಪೊಲೀಸ್‌ ಅಧೀಕ್ಷಕರೆಲ್ಲರೂ ಸಭೆ ನಡೆಸಿದ್ದಾರೆ. ಇದರಲ್ಲಿ ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಜಾಗರೂಕತೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸಿಸಿಟೀವಿ ಕ್ಯಾಮೆರಾ ಅಳವಡಿಕೆ, ಇರುವ ಕ್ಯಾಮೆರಾಗಳ ವಸ್ತು ಸ್ಥಿತಿ ನೋಡುವಂತೆ ಸೂಚಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳಕ್ಕೆ ಹೆಚ್ಚು ಎಚ್ಚರದಿಂದಿಲು ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ.