ಸಾರಾಂಶ
ಕೀರ್ತಿ ಚಕ್ರ ಪುರಸ್ಕೃತ ಕ್ಯಾ. ಅಂಶುಮನ್ ಸಿಂಗ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಸೆಲ್ ಶನಿವಾರ ಎಫ್‌ಐಆರ್ ದಾಖಲಿಸಿದೆ.
ನವದೆಹಲಿ: ಕೀರ್ತಿ ಚಕ್ರ ಪುರಸ್ಕೃತ ಕ್ಯಾ. ಅಂಶುಮನ್ ಸಿಂಗ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಸೆಲ್ ಶನಿವಾರ ಎಫ್‌ಐಆರ್ ದಾಖಲಿಸಿದೆ.
ಈ ಮುನ್ನ ರಾಷ್ಟ್ರೀಯ ಮಹಿಳಾ ಆಯೋಗ ಸು ಮೋಟೋ ಪ್ರಕರಣ ದಾಖಲಿಸಿಕೊಂಡು ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನ್ಯಾಯಯುತ ಮತ್ತು ಸಮಯೋಚಿತ ತನಿಖೆಗೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಎಫ್‌ಐಆರ್ ದಾಖಲಿಸಿ, ಅಶ್ಲೀಲ ಕಾಮೆಂಟ್ ಮಾಡಿದ ಖಾತೆಯ ಕುರಿತು ಮಾಹಿತಿ ನೀಡುವಂತೆ ಎಕ್ಸ್‌ಗೆ ಮನವಿ ಮಾಡಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79ರ ಅಡಿಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ತರುವುದಕ್ಕೆ ಹಾಗೂ ಐಟಿ ಕಾಯ್ದೆ, 2000ರ ಸೆಕ್ಷನ್ 67ರ ಅಡಿಯಲ್ಲಿ ಹಾಗೂ ಎಲೆಕ್ಟ್ರಾನಿಕ್ ರೂಪ ಅಶ್ಲೀಲವಾಗಿ ಸಂದೇಶ ಕಳಿಸುವುದಕ್ಕೆ ಶಿಕ್ಷೆ ನಿಗದಿಪಡಿಸಲಾಗಿದೆ.