ಸಾರಾಂಶ
ಬೆಂಗಳೂರಿನಿಂದ ಅಯೋಧ್ಯೆಗೆ ತೆರಳುವ ನೇರ ವಿಮಾನಕ್ಕೆರುತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಸಿರು ನಿಶಾನೆ ತೋರಿಸಿದರು.
ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಬುಧವಾರ ಬೆಂಗಳೂರಿನಿಂದ ಅಯೋಧ್ಯೆಗೆ ಏರ್ ಇಂಡಿಯಾ, ನೇರ ವಿಮಾನ ಹಾರಾಟ ಆರಂಭಿಸಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾಯುಸೇವೆಗೆ ಹಸಿರು ನಿಶಾನೆ ತೋರಿಸಿದರು.
ಏರ್ ಇಂಡಿಯಾ ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡಿ.30ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾಗಿದ್ದ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮಕ್ಕೆ ಸೇವೆ ಒದಗಿಸಲಿದೆ.
ಇದರ ಜೊತೆಗೆ ಅಯೋಧ್ಯೆಯಿಂದ ಕೊಲ್ಕತಾಗೂ ವಿಮಾನ ಸೇವೆ ಬುಧವಾರದಿಂದ ಪ್ರಾರಂಭವಾಗಿದೆ. ಇದಕ್ಕೂ ಮೊದಲು ಅಯೋಧ್ಯೆಯಿಂದ ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ಗೆ ವಿಮಾನ ಸೇವೆ ಆರಂಭವಾಗಿತ್ತು.