ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಕಾರ

| Published : Apr 23 2024, 12:50 AM IST / Updated: Apr 23 2024, 07:08 AM IST

Narendra Modi Aligarh rally

ಸಾರಾಂಶ

ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ.

ನವದೆಹಲಿ: ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ. 

ಈ ಕುರಿತು ಚುನಾವಣಾ ಆಯೋಗದ ವಕ್ತಾರರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ನಿರಾಕರಿಸುತ್ತಾ, ‘ಪ್ರಧಾನಿ ಬನ್ಸ್‌ವಾರಾದಲ್ಲಿ ನೀಡಿದ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ತಿಳಿಸಿದರು.