ಸಾರಾಂಶ
ತಾನು ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಮಾಡಬಲ್ಲೆ ಎಂದು ಹೇಳಿರುವ ವ್ಯಕ್ತಿಯ ವಿರುದ್ಧ ಮುಂಬೈನ ಸೈಬರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ನವದೆಹಲಿ: ತಾನು ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಮಾಡಬಲ್ಲೆ ಎಂದು ಹೇಳಿರುವ ವ್ಯಕ್ತಿಯ ವಿರುದ್ಧ ಮುಂಬೈನ ಸೈಬರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಸೈಯದ್ ಶುಜಾ ಎನ್ನುವ ವ್ಯಕ್ತಿ ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಮಾಡಬಹುದು , ತಿರುಚಬಹುದು ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಇದು ಸುಳ್ಳು, ಆಧಾರ ರಹಿತ ಎಂದು ಸ್ಪಷ್ಟಪಡಿಸಿ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ, ಐಟಿ ಕಾಯ್ದೆಯಡಿ ದಕ್ಷಿಣ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
‘2019ರಲ್ಲಿ ಶಾಜಾ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ದೆಹಲಿಯಲ್ಲಿ ಅವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಆತ ಬೇರೆ ದೇಶದಲ್ಲಿ ತಲೆ ಮರೆಸಿಕೊಂಡಿರಬಹುದು’ ಎಂದು ಮಹಾರಾಷ್ಟ್ರದ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.