ಸಾರಾಂಶ
ಸಿಎಂ ಕೇಜ್ರಿವಾಲ್‌ಗೆ ನೋಟಿಸ್ ನೀಡಿದ ಹಗರಣದಲ್ಲಿ ಇಡಿ ಚಾರ್ಜ್‌ಶೀಟ್ ಸಲ್ಲಿಸಿದೆ.
ನವದೆಹಲಿ: ರಾಜಧಾನಿ ನವದೆಹಲಿಯ ಜಲಮಂಡಳಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಜಾರಿ ನಿರ್ದೇಶನಾಲಯ ಸ್ಥಳೀಯ ನ್ಯಾಯಾಲಯಕ್ಕೆ ಮೊದಲ ಆರೋಪಪಟ್ಟಿ ಸಲ್ಲಿಸಿದೆ.
8000 ಪುಟಗಳಷ್ಟಿರುವ ಆರೋಪಪಟ್ಟಿಯಲ್ಲಿ ಜಲಮಂಡಳಿಯ ಮಾಜಿ ಮುಖ್ಯ ಎಂಜಿನಿಯರ್ ಜಗದೀಶ್ ಕುಮಾರ್ ಆರೋರಾ, ಗುತ್ತಿಗೆದಾರ ಅನಿಲ್ ಕುಮಾರ್ ಅಗರ್‌ವಾಲ್, ನ್ಯಾಷನಲ್ ಬಿಲ್ಡಿಂಗ್ ಕನ್‌ಸ್ಟ್ರಕ್ಷನ್ ಕಾಪೋರೇಷನ್‌ನ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಡಿ.ಕೆ.ಮಿತ್ತಲ್, ತೇಜಿಂದರ್ ಸಿಂಗ್ ಮತ್ತು ಎನ್‌ಕೆಜಿ ಇನ್ಪ್ರಾಸ್ಟ್ರಕ್ಷರ್ ಎಂಬ ಕಂಪನಿಯನ್ನ ಆರೋಪಿಗಳೆಂದು ಹೆಸರಿಸಲಾಗಿದೆ.ಈ ನಾಲ್ವರನ್ನೂ ಪ್ರಕರಣ ಸಂಬಂಧ ವಿಚಾರಣೆಗೆ ಒಳಪಡಿಸಬೇಕಿದ್ದು, ಈ ವೇಳೆ ಸಿಗುವ ಮಾಹಿತಿ ಆಧರಿಸಿ ಮುಂದೆ ಇನ್ನಷ್ಟು ಆರೋಪಟ್ಟಿ ಸಲ್ಲಿಸಲಾಗುವುದು ಎಂದು ಜಾರಿ ಇ.ಡಿ. ಕೋರ್ಟ್‌ಗೆ ಮಾಹಿತಿ ನೀಡಿದೆ. ಜೊತೆಗೆ ಈ ಹಗರಣದ ಮೂಲಕ ಸಂಗ್ರಹಿಸಿದ ಹಣವನ್ನು ಆಮ್‌ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.
ಇದೇ ಪ್ರಕರಣದಲ್ಲಿ ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ. ಸಮನ್ಸ್ ನೀಡಿತ್ತು. ಆದರೆ ಅವರು ವಿಚಾರಣೆಗೆ ಗೈರಾಗಿದ್ದರು.