ಸಾರಾಂಶ
ವಿಚಾರಣೆಗೆ ಸತತ 8 ಬಾರಿ ಗೈರಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದೆ.
ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿರುವ ಎಂಟು ವಿಚಾರಣಾ ಸಮನ್ಸ್‌ಗೆ ಗೈರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಇ.ಡಿ. ದೆಹಲಿ ಸ್ಥಳೀಯ ನ್ಯಾಯಾಲಯದಲ್ಲಿ ಹೊಸ ಪ್ರಕರಣ ದಾಖಲಿಸಿದೆ.
ಕೇಜ್ರಿವಾಲ್ ತಮಗೆ ನೀಡಲಾದ 4ರಿಂದ8ನೇ ಸಮನ್ಸ್‌ಗೆ ಗೈರಾಗುವ ಮೂಲಕ ನಿರ್ಲಕ್ಷ್ಯ ತೋರಿದ ಕುರಿತು ಕ್ರಮ ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಇ.ಡಿ. ಉಲ್ಲೇಖಿಸಿದೆ.ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಇದಕ್ಕೂ ಮೊದಲು ಇಡಿ ಮೊದಲ ಮೂರು ಸಮನ್ಸ್‌ಗಳಿಗೆ ಕೇಜ್ರಿವಾಲ್ ಗೈರಾಗಿದ್ದಾರೆಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಅದರ ವಿಚಾರಣೆಯು ಮಾ.16ರಂದು ನಡೆಯಲಿದೆ.