ವಿಶ್ವಾಸಮತಕ್ಕೆ ಹೋಗಲು ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ಗೆ ಜಾರಿ ನಿರ್ದೇಶನಾಲಯ ಅನುಮತಿ ನೀಡಿದೆ.

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲ (ಇ.ಡಿ) ಬಂಧಿಸಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ, ಹೇಮಂತ್ ಸೊರೇನ್‌, ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲು ರಾಂಚಿಯ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಕಳೆದ ಬುಧವಾರ ಹೇಮಂತ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜೆಎಂಎಂ ಶಾಸಕ ಚಂಪೈ ಸೊರೇನ್‌, ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿ ಸರ್ಕಾರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಹೊಸ ಸರ್ಕಾರ ರಚನೆಗೆ ಅವರು ಸೋಮವಾರ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಇದರಲ್ಲಿ ಭಾಗಿಯಾಗಲು ಹೇಮಂತ್‌ ಅವಕಾಶ ಕೋರಿದ್ದರು.