ಸಾರಾಂಶ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ ಜಾರಿ ನಿರ್ದೇಶನಾಲಯದ ನೋಟಿಸ್ ಜಾರಿ ಮಾಡಿದೆ.
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ ಜಾರಿ ನಿರ್ದೇಶನಾಲಯದ ನೋಟಿಸ್ ಜಾರಿ ಮಾಡಿದೆ.
ನೀವು ಮಾಡಿದ ಆರೋಪ ಸಾಬೀತುಪಡಿಸುವ ಎಲ್ಲಾ ದಾಖಲೆಗಳೊಂದಿಗೆ ಸೆ.9ಕ್ಕೆ ವಿಚಾರಣೆಗೆ ಹಾಜರಾಗಿ ಎಂದು ಇ.ಡಿ. ನೋಟಿಸ್ ನೀಡಿದೆ.
ರಾಹುಲ್ ಗಾಂಧಿ, ಬ್ರಿಟನ್ ಪೌರತ್ವ ಹೊಂದಿದ್ದಾರೆ ಎಂದು ಸಾಬೀತುಪಡಿಸುವ ಕೆಲ ದಾಖಲೆಗಳು ಮತ್ತು ಬ್ರಿಟನ್ ಸರ್ಕಾರದ ಇ ಮೇಲ್ ಮಾಹಿತಿ ತಮ್ಮ ಬಳಿ ಇದೆ. ಅವರು ಬ್ರಿಟನ್ ಪ್ರಜೆಯಾದ ಕಾರಣ ಅವರು ಭಾರತದ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಹೇಳಿ ಶಿಶಿರ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಆ.30ರಂದು ಮಧ್ಯಂತರ ಆದೇಶ ಹೊರಡಿಸಿದ್ದ ಕೋರ್ಟ್, ಮೇಲ್ನೋಟಕ್ಕೆ ಅರ್ಜಿ ವಿಚಾರಣೆಗೆ ಅರ್ಹ ಎಂದು ಕಂಡುಬರುತ್ತಿದೆ ಎಂದು ಹೇಳಿತ್ತು. ಜೊತೆಗೆ ಶಿಶಿರ್‌ಗೆ ದಿನದ 24 ಗಂಟೆಯೂ ಭದ್ರತೆ ನೀಡುವಂತೆ ಸೂಚಿಸಿತ್ತು.