ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ನವದೆಹಲಿ: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ಈ ಪ್ರಕರಣದ ವಿದೇಶಿ ವಿನಿಮಯ ಉಲ್ಲಂಘನೆ ಕೇಸಲ್ಲಿ ಮೊದಲು ನೀಡಿದ್ದ ಎರಡು ಸಮನ್ಸ್‌ಗಳಿಗೆ ಮಹುವಾ ಗೈರಾಗಿದ್ದರು. ಬಳಿಕ ಕಳೆದ ಶನಿವಾರವಷ್ಟೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. 

ಅಲ್ಲದೆ ಬುಧವಾರದಂದು ಈ ಪ್ರಕರಣದಲ್ಲಿ ಮಹುವಾರ ನಿಕಟವರ್ತಿ ವಕೀಲರೊಬ್ಬರನ್ನು ಇಡಿ ತನಿಖೆಗೊಳಪಡಿಸಿದೆ ಎಂದು ತಿಳಿದುಬಂದಿದೆ. ಮಹುವಾ ಮೊಯಿತ್ರಾ ಅವರು ಕೃಷ್ಣಾನಗರದಿಂದ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.