ಸಾರಾಂಶ
ಬಾಲಿವುಡ್‌ನ ಖ್ಯಾತ ನಿರ್ಮಾಪಕಿ, ಆಲ್ಟ್ ಬಾಲಾಜಿ ಟೆಲಿಫಿಲ್ಮ್ಸ್ ಒಡತಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಪೋಕ್ಸೋ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ.
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ಮಾಪಕಿ, ಆಲ್ಟ್ ಬಾಲಾಜಿ ಟೆಲಿಫಿಲ್ಮ್ಸ್ ಒಡತಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಪೋಕ್ಸೋ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ.
ವೆಬ್ ಸಿರೀಸ್‌ನಲ್ಲಿ ಅಶ್ಲೀಲ ದೃಶ್ಯಗಳಿಗೆ ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೋರಿವಲಿ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.
ಬೋರಿವಲಿಯ ಯೋಗ ಶಿಕ್ಷಕ 39 ವರ್ಷದ ಸ್ವಪ್ನಿಲ್ ರೇವಾಜಿ 2021ರಲ್ಲಿ, ‘ಕ್ಲಾಸ್ ಆಫ್ 2017, ಕ್ಲಾಸ್ ಆಫ್ 2020 ವೆಬ್ ಸರಣಿಯಲ್ಲಿ ಬಾಲಕಿಯರನ್ನು ಅಶ್ಲೀಲ ದೃಶ್ಯಗಳ ಚಿತ್ರೀಕರಣಕ್ಕೆ ಬಳಸಿಕೊಳ್ಳಲಾಗಿದೆ‘ ಎಂದು ದೂರಿದ್ದರು. ಬಳಿಕ ಬೊರಿವಲಿ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಕೋರ್ಟ್ ನಿರ್ದೇಶನದಂತೆ ಪೋಕ್ಸೋ ಕೇಸ್ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ.ಆದರೆ ಬಾಲಾಜಿ ಟೆಲಿಫಿಲ್ಮ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.