ಸಾರಾಂಶ
ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ ಹಾಗೂ ನವೆಂಬರ್ ತಿಂಗಳ ಮೂರನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ನವದೆಹಲಿ: ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ ಹಾಗೂ ನವೆಂಬರ್ ತಿಂಗಳ ಮೂರನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.ಅ.29ರಿಂದ ನವೆಂಬರ್ 3ರವರೆಗೆ ದೀಪಾವಳಿ ಹಬ್ಬವಿರಲಿದೆ. ಹೀಗಾಗಿ ಈ ರಾಜ್ಯಗಳ ಮತದಾರರಿಗೆ ಅನುಕೂಲವಾಗಬೇಕು ಎನ್ನುವ ಕಾರಣಕ್ಕೆ ಹಬ್ಬ ಆದ ನಂತರ ನವೆಂಬರ್ 3ನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ 45 ವಿಧಾನಸಭಾ ಕ್ಷೇತ್ರಗಳು, ರಾಹುಲ್ ಗಾಂಧಿ ರಾಜೀನಾಮೆ ಕಾರಣ ತೆರವಾದ ಕೇರಳದ ವಯನಾಡ್, ಪ.ಬಂಗಾಳದ ಬಸಿರ್ಹತ್ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೂ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಬಹುದು ಎಂದು ಹೇಳಲಾಗಿದೆ.