ನಕಲಿ ಪೋಸ್ಟ್‌ಗಳನ್ನು ರಾಜಕೀಯ ಪಕ್ಷಗಳು ತಮ್ಮ ಸಾಮಾಜಿಕ ಮಾಧ್ಯಮದಿಂದ 3 ಗಂಟೆಯೊಳಗೆ ತೆಗೆದು ಹಾಕಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ತಿರುಚಲಾದ ವಿಡಿಯೋ ಘಟನೆ ಹಿನ್ನೆಲೆ ಎಚ್ಚೆತ್ತ ಚುನಾವಣಾ ಆಯೋಗವು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ವಿಡಿಯೋ, ಫೋಟೊಗಳು ನಕಲಿ ಎಂದು ಗೊತ್ತಾದಲ್ಲಿ ಅದನ್ನು ಫೋಸ್ಟ್‌ ಮಾಡಿದ 3 ಗಂಟೆಯೊಳಗೆ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಈ ಬಗ್ಗೆ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿರುವ ಆಯೋಗವು ಬೇಕು ಅಂತಲೇ ನಕಲಿ ವಿಡಿಯೋ ಪೋಸ್ಟ್‌ ಮಾಡಿ ಇತರರಿಗೆ ಹಂಚಿದ್ದಲ್ಲಿ ಅಂತವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.