ಸಾರಾಂಶ
ಬಹುನಿರೀಕ್ಷಿತ ರಾಜಕೀಯ ಮಹಾಸಮರವಾದ ಲೋಕಸಭೆ ಚುನಾವಣೆಗೆ ಶನಿವಾರ ಮುಹೂರ್ತ ನಿಗದಿಯಾಗಲಿದ್ದು, ಚುನಾವಣೆಯ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದೆ.
ಪಿಟಿಐ ನವದೆಹಲಿ
ಬಹುನಿರೀಕ್ಷಿತ ರಾಜಕೀಯ ಮಹಾಸಮರವಾದ ಲೋಕಸಭೆ ಚುನಾವಣೆಗೆ ಶನಿವಾರ ಮುಹೂರ್ತ ನಿಗದಿಯಾಗಲಿದ್ದು, ಚುನಾವಣೆಯ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದೆ.
ಶನಿವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯ ಚುನಾವಣಾ ಆಯುಕ್ತ ಹಾಗೂ ಇನ್ನಿಬ್ಬರು ನೂತನ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಈ ಕುರಿತು ಶುಕ್ರವಾರ ಎಕ್ಸ್‌ನಲ್ಲಿ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಲೋಕಸಭೆ ಚುನಾವಣೆಯ ಜೊತೆಗೆ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೂ ದಿನಾಂಕ ನಿಗದಿಪಡಿಸುವುದಾಗಿ ಹೇಳಿದೆ.
ಜೂನ್ 16ಕ್ಕೆ ಈಗಿನ ಲೋಕಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ಹೊಸ ಲೋಕಸಭೆ ಅಸ್ತಿತ್ವಕ್ಕೆ ಬರಬೇಕಿದೆ. ಇನ್ನು ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭೆ ಅವಧಿ ಕೂಡ ಜೂನ್‌ನಲ್ಲಿ ಮುಕ್ತಾಯಗೊಳ್ಳಲಿದೆ.
ಆ ರಾಜ್ಯಗಳ ವಿಧಾನಸಭೆಗೂ ಲೋಕಸಭೆಯ ಜೊತೆಗೇ ಚುನಾವಣೆ ನಡೆಯಲಿದೆ.ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲೂ ಚುನಾವಣೆ ನಡೆಸುವುದು ಬಾಕಿಯಿದೆ.
ಅಲ್ಲಿಗೂ ಲೋಕಸಭೆಯ ಜೊತೆಗೇ ಚುನಾವಣೆ ನಡೆಯುವುದೇ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ.ಎಷ್ಟು ಹಂತದಲ್ಲಿ ಮತದಾನ:ಕಳೆದ ಬಾರಿ ಲೋಕಸಭೆ ಚುನಾವಣೆಯನ್ನು ಮಾ.10ರಂದು ಘೋಷಿಸಲಾಗಿತ್ತು.
ಏ.11ರಿಂದ ಆರಂಭವಾಗಿ ಏಳು ಹಂತದಲ್ಲಿ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬಾರಿ ಎಷ್ಟು ಹಂತಗಳಲ್ಲಿ ಮತದಾನ ನಡೆಯಲಿದೆ ಮತ್ತು ಯಾವತ್ತು ಫಲಿತಾಂಶ ಪ್ರಕಟವಾಗಲಿದೆ ಎಂಬುದು ಚುನಾವಣಾ ಆಯುಕ್ತರ ಪತ್ರಿಕಾಗೋಷ್ಠಿಯಲ್ಲೇ ತಿಳಿಯಲಿದೆ.
ಒಂದು ದಿನ ಮೊದಲೇ ಮಾಹಿತಿ!ಲೋಕಸಭೆ ಅಥವಾ ವಿವಿಧ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬಗ್ಗೆ ಸುದ್ದಿಗೋಷ್ಠಿ ನಡೆಸುವ ವಿಚಾರವನ್ನು ಸಾಮಾನ್ಯವಾಗಿ ಒಂದು ದಿನ ಮೊದಲೇ ಆಯೋಗ ತಿಳಿಸುವುದಿಲ್ಲ.
ದಿನಾಂಕ ಘೋಷಿಸುವ ಸಮಯಕ್ಕೆ ಮೂರ್ನಾಲ್ಕು ತಾಸು ಮೊದಲು ಮಾಹಿತಿ ನೀಡುತ್ತದೆ. ಆದರೆ ಈ ಬಾರಿ ಅಚ್ಚರಿಯ ರೀತಿಯಲ್ಲಿ ಒಂದು ದಿನ ಮೊದಲೇ ಚುನಾವಣಾ ಆಯೋಗ ದಿನಾಂಕ ಘೋಷಣೆ ಕುರಿತ ಮಾಹಿತಿ ನೀಡಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ 97 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ. 12 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ ಪಕ್ಷ 52 ಸೀಟುಗಳನ್ನು ಗೆದ್ದು, ಅಧಿಕೃತ ವಿರೋಧ ಪಕ್ಷದ ಮಾನ್ಯತೆ ಗಳಿಸುವುದಕ್ಕೂ ವಿಫಲವಾಗಿತ್ತು.
ಈ ಬಾರಿ ವಿಪಕ್ಷಗಳು ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿದ್ದು, ಬಿಜೆಪಿ ಹಾಗೂ ಇಂಡಿಯಾ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿ ನಡೆಯುವುದು ನಿಶ್ಚಿತವಾಗಿದೆ.
ಚುನಾವಣಾ ಪೂರ್ವ ಸಮೀಕ್ಷೆಗಳು ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಹಿಂದೆಂದಿಗಿಂತ ಹೆಚ್ಚು ಸ್ಥಾನ ಪಡೆದು ‘ಐತಿಹಾಸಿಕ ಜಯ’ ಜಯ ಗಳಿಸಲಿದೆ ಎಂದು ಭವಿಷ್ಯ ನುಡಿದಿವೆ.
543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 411 ಸೀಟುಗಳನ್ನೂ, ಬಿಜೆಪಿಯೊಂದೇ 350 ಸೀಟುಗಳನ್ನೂ ಗೆಲ್ಲಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ.
ಇಂದಿನಿಂದಲೇ ನೀತಿ ಸಂಹಿತೆಸರ್ಕಾರ/ಸಚಿವರು ಅನುದಾನ ಅಥವಾ ಭರವಸೆಗಳನ್ನು ಪ್ರಕಟಿಸುವಂತಿಲ್ಲಶಂಕುಸ್ಥಾಪನೆ, ಉದ್ಘಾಟನೆ, ಚಾಲನೆ ಕಾರ್ಯಕ್ರಮ ನೆರವೇರಿಸುವಂತಿಲ್ಲ ಮತದಾರರ ಮೇಲೆ ಪ್ರಭಾವ ಬೀರುವಂತಹ ನೇಮಕಾತಿ ಮಾಡುವಂತಿಲ್ಲಚುನಾವಣೆ ಕೆಲಸಕ್ಕೆ ರಾಜಕಾರಣಿಗಳು ಸರ್ಕಾರಿ ವಾಹನ ಬಳಸುವಂತಿಲ್ಲ
)
;Resize=(128,128))
;Resize=(128,128))
;Resize=(128,128))
;Resize=(128,128))