ಸಾರಾಂಶ
ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ 2018ರ ಮಾರ್ಚ್‌ನಿಂದ 2024ರ ಜನವರಿವರೆಗೆ 16,518 ಕೋಟಿ ರು. ಹಣವು ದೇಶದ ರಾಜಕೀಯ ಪಕ್ಷಗಳಿಗೆ ಸಂದಾಯವಾಗಿದೆ ಎಂದು ಸರ್ಕಾರ ಸಂಸತ್ತಿಗೆ ನೀಡಿದ್ದ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ಇನ್ನು 2017-18ರಿಂದ 2022-23ರ ನಡುವಿನ ಅವಧಿಯಲ್ಲಿ ಎಸ್‌ಬಿಐ ಮೂಲಕ 30 ಕಂತುಗಳಲ್ಲಿ 12,008 ಮೌಲ್ಯದ ಬಾಂಡ್‌ಗಳನ್ನು ವಿತರಿಸಲಾಗಿದೆ. ಇದರಲ್ಲಿ ಬಿಜೆಪಿಗೆ ಅತಿ ಹೆಚ್ಚು ಎಂದರೆ 6,564 ಕೋಟಿ ರು. (ಶೇ.55ರಷ್ಟು ಹಣ) ದೇಣಿಗೆ ರೂಪದಲ್ಲಿ ಹರಿದುಬಂದಿದೆ.
ನಂತರದ 2 ಸ್ಥಾನಗಳಲ್ಲಿರುವ ಕಾಂಗ್ರೆಸ್‌ಗೆ 1,135 ಕೋಟಿ ರು. (ಶೇ.9.5) ಹಾಗೂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ಗೆ 1,096 ಕೋಟಿ ರು., ಜೆಡಿಎಸ್‌ಗೆ 13 ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಸಂದಾಯವಾಗಿವೆ ಎಂದು ಅಂಕಿ-ಅಂಶಗಳು ಹೇಳಿವೆ.
ಅನೇಕ ಪ್ರಾದೇಶಿಕ ಪಕ್ಷಗಳು ಕೂಡ ನೂರಾರು ಕೋಟಿ ರು. ಮೊತ್ತದ ಬಾಂಡ್ ಪಡೆದಿವೆ.
ಚುನಾವಣಾ ಬಾಂಡ್‌ಗಳು 1000 ರು., 1 ಲಕ್ಷ ರು., 10 ಲಕ್ಷ ರು., ಹಾಗೂ 1 ಕೋಟಿ ರು. ಮುಖಬೆಲೆಯಲ್ಲಿ ಎಸ್‌ಬಿಐ ಶಾಖೆಗಳಲ್ಲಿ ಲಭ್ಯ ಇದ್ದವು.