ರಾಯ್‌ಬರೇಲಿ: ರಾಹುಲ್‌ ಪರ ಪ್ರಚಾರಕ್ಕೆ ಧುಮುಕಿದ ಪ್ರಿಯಾಂಕಾ

| Published : May 09 2024, 01:03 AM IST / Updated: May 09 2024, 05:05 AM IST

ರಾಯ್‌ಬರೇಲಿ: ರಾಹುಲ್‌ ಪರ ಪ್ರಚಾರಕ್ಕೆ ಧುಮುಕಿದ ಪ್ರಿಯಾಂಕಾ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸೋದರ ರಾಹುಲ್‌ ಗಾಂಧಿ ಪರ ಬುಧವಾರ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಧುಮಿಕಿದ್ದಾರೆ.

 ರಾಯ್‌ಬರೇಲಿ :  ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸೋದರ ರಾಹುಲ್‌ ಗಾಂಧಿ ಪರ ಬುಧವಾರ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಧುಮಿಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ಇಲ್ಲಸಲ್ಲದ ಸುಳ್ಳುಗಳನ್ನು ಹೇಳುತ್ತಿದ್ದಾರೆ. ರಾಹುಲ್‌ ಗಾಂಧಿ ಅಂದರೆ ಏನು ಎಂಬುದು ರಾಯ್‌ಬರೇಲಿಯ ಜನತೆ ಗೊತ್ತು. ಕಾಂಗ್ರೆಸ್‌ ಪಕ್ಷಕ್ಕೂ ರಾಯ್‌ಬರೇಲಿಗೂ 100 ವರ್ಷಗಳ ಸಂಬಂಧವಿದೆ. ಇಲ್ಲಿಯ ಜನತೆ ನಮ್ಮ ನಾಯಕತ್ವವನ್ನು ಮೆಚ್ಚಿದ್ದಾರೆ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇವಲ ಧರ್ಮ, ಜಾತಿ, ದೇಗುಲ ಮತ್ತು ಮಸೀದಿಗಳ ಬಗ್ಗೆ ಮಾತನಾಡುತ್ತದೆಯೇ ಹೊರತು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಸುಮ್ಮನೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕೆಲವು ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಯವರಿಗೆ ಸೋಲುವ ಭೀತಿ ಶುರುವಾಗಿದೆ. ಆದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಯಾವುದೇ ಯೋಚನೆಗಳನ್ನು ಹೊಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.