ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಅಸ್ವಸ್ಥ: ಆಸ್ಪತ್ರೆಗೆ ದಾಖಲು

| Published : Mar 15 2024, 01:18 AM IST

ಸಾರಾಂಶ

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಆವರು ಅನಾರೋಗ್ಯದ ಕಾರಣ ಮಹಾರಾಷ್ಟ್ರದ ಪುಣೆ ನಗರದ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಆವರು ಅನಾರೋಗ್ಯದ ಕಾರಣ ಮಹಾರಾಷ್ಟ್ರದ ಪುಣೆ ನಗರದ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾಟೀಲ್‌ ಅವರಿಗೆ ಬುಧವಾರ ತಡರಾತ್ರಿ ಜ್ವರ ಮತ್ತು ಎದೆ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರಾ ನಿಗಾ ವಹಿಸಿ ಆಕೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಟೀಲ್‌ ಅವರು ಭಾರತದ ಮೊದಲ ಮಹಿಳಾ ರಾಷ್ಟ್ರಪತಿ. 2007ರಿಂದ 2012ರವರೆಗೆ ರಾಷ್ಟ್ರಪತಿ ಹುದ್ದೆಯಲ್ಲಿದ್ದರು.