ಸಿಎಂ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ

| Published : Apr 02 2024, 01:04 AM IST

ಸಾರಾಂಶ

ಮದ್ಯ ಲೈಸೆನ್ಸ್‌ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏ.15ರವರೆಗೂ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ನವದೆಹಲಿ: ಮದ್ಯ ಲೈಸೆನ್ಸ್‌ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏ.15ರವರೆಗೂ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆಗೆ ಕೇಜ್ರಿವಾಲ್‌ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ಮತ್ತೆ 15 ದಿನಗಳ ಕಾಲಕ್ಕೆ ವಶಕ್ಕೆ ಒಪ್ಪಿಸಬೇಕೆಂದು ಇ.ಡಿ. ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಇದೇ ವೇಳೆ ಜೈಲಿನೊಳಗೆ ಓದಲು ತಮಗೆ ರಾಮಾಯಣ, ಭಗವದ್ಗೀತೆ ಮತ್ತು ಪತ್ರಕರ್ತೆ ನೀರಜಾ ಚೌಧರಿ ಬರೆದಿರುವ 6 ಮಾಜಿ ಪ್ರಧಾನಿಗಳ ಕುರಿತಾದ ‘ಹೌ ಪ್ರೈ ಮಿನಿಸ್ಟರ್‌ ಡಿಸೈಡ್ಸ್‌’ ಪುಸ್ತಕಗಳನ್ನು ಒದಗಿಸುವಂತೆ ಕೋರಿದರು. ಇದೇ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್‌, ಮೋದಿ ಏನು ಮಾಡುತ್ತಿದ್ದಾರೋ ಅದು ದೇಶಕ್ಕೆ ಒಳ್ಳೆಯದಲ್ಲ ಎಂದರು.