ಸಾರಾಂಶ
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ಕೇಜ್ರಿವಾಲ್ ವಿರುದ್ಧ ಇ.ಡಿ. ಹೂಡಿದ್ದ 2 ದಾವೆಗಳ ವಿಚಾರಣೆ ನಡೆಸಿದ ನ್ಯಾ. ದಿವ್ಯಾ ಮಲ್ಹೋತ್ರಾ, ‘ಈ ಪ್ರಕರಣದಲ್ಲಿ ಜಾಮೀನು ನೀಡಲು ಅವಕಾಶವಿರುವುದರಿಂದ ಆರೋಪಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಒದಗಿಸಲಾಗುತ್ತಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ’ ಎಂದು ತೀರ್ಪು ನೀಡಿದರು.