ಅಬಕಾರಿ ಹಗರಣ: ಮಾ.23ರವರೆಗೆ ಇ.ಡಿ. ಕಸ್ಟಡಿಗೆ ಕವಿತಾ

| Published : Mar 17 2024, 01:45 AM IST / Updated: Mar 17 2024, 08:37 AM IST

ಸಾರಾಂಶ

ಬಿಆರ್‌ಎಸ್‌ ನಾಯಕಿ ಕೆ. ಕವಿತಾರನ್ನು ಮಾರ್ಚ್‌ 23ರವರೆಗೆ ಇಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ನವದೆಹಲಿ: ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾರನ್ನು ಮಾರ್ಚ್‌ 23ರವರೆಗೆ ಇಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. 

ಇಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಫೆಡರಲ್ ಆಂಟಿ ಮನಿ ಲಾಂಡರಿಂಗ್ ಏಜೆನ್ಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿ ಈ ಆದೇಶ ಹೊರಡಿಸಿದ್ದಾರೆ. ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ ರಾವ್ ಪುತ್ರಿ ಕವಿತಾರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಇಡಿ 10 ದಿನ ಕಸ್ಟಡಿಗೆ ನೀಡುವಂತೆ ಕೋರಿತ್ತು. ನ್ಯಾಯಾಲಯ ಮಾರ್ಚ್ 23ರವರೆಗೆ ಇಡಿ ವಶಕ್ಕೆ ನೀಡಿದೆ.