ಸಾರಾಂಶ
ಆ್ಯಕ್ಸಿಯೋಂ-4 ಯೋಜನೆಯ ಭಾಗವಾಗಿ ಭಾರತೀಯ ಶುಭಾಂಶು ಶುಕ್ಲಾ, ಜೂ.10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.
40 ವರ್ಷದ ಬಳಿಕ ಭಾರತೀಯ ಅಂತರಿಕ್ಷಕ್ಕೆ
ನವದೆಹಲಿ: ಆ್ಯಕ್ಸಿಯೋಂ-4 ಯೋಜನೆಯ ಭಾಗವಾಗಿ ಭಾರತೀಯ ಶುಭಾಂಶು ಶುಕ್ಲಾ, ಜೂ.10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದರೊಂದಿಗೆ 40 ವರ್ಷಗಳಿಕ ಅಂತರಿಕ್ಷ ಯಾತ್ರೆ ಕೈಗೊಳ್ಳುತ್ತಿರುವ ಮೊದಲ ಭಾರತೀಯ, ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳುತ್ತಿರುವ ಮೊದಲ ಭಾರತೀಯ ಎಂಬ ಹಿರಿಮೆಗೆ ಅವರು ಪಾತ್ರರಾಗಲಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ, ರಷ್ಯಾದ ಸೂಯೆಜ್ ನೌಕೆಯಲ್ಲಿ ಅಂತರಿಕ್ಷ ಪ್ರವಾಸ ಕೈಗೊಂಡು ಇತಿಹಾಸ ನಿರ್ಮಿಸಿದ್ದರು.ಭಾರತೀಯ ಕಾಲಮಾನ ಮಂಗಳವಾರ ಸಂಜೆ 5:52ಕ್ಕೆ ಅಮೆರಿಕದ ಫ್ಲೋರಿಡಾದಿಂದ ಸ್ಪೇಸೆಕ್ಸ್‌ನ ಫಾಲ್ಕನ್ 9 ರಾಕೆಟ್ ಮೂಲಕ ಶುಕ್ಲಾ ಮತ್ತು ಇತರೆ ಮೂವರು ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಮಾತನಾಡಿದ ಶುಕ್ಲಾ,‘ಇಂಥ ದೊಡ್ಡ ಯೋಜನೆಯ ಭಾಗಿರುವುದಕ್ಕೆ ತುಂಬಾ ಅದೃಷ್ಟಶಾಲಿ ಎನಿಸುತ್ತಿದೆ. ಈ ಪಯಣವು ತುಂಬಾ ಖುಷಿ ನೀಡುತ್ತಿದೆ ಎಂದು ಹೇಳಿದ್ದಾರೆ. ಜೊತೆಗೆ ನಾನು ಭಾಗವಾಗಿರುವ ಈ ಯೋಜನೆಗೆ ನನ್ನ ಪಾಲಿಗೆ ಅತ್ಯಂತ ದೊಡ್ಡ ಯೋಜನೆಯಾಗಿದೆ. ನಾನು ಇಲ್ಲಿಗೆ ಬರುತ್ತೇನೆ ಎಂಬುದೇ ಗೊತ್ತಿಲ್ಲದಾಗ, ಈ ಕ್ಷಣದಲ್ಲಿ ನಿಂತಿರುವುದು ತುಂಬಾ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.