ಸಾರಾಂಶ
ಸುಮಾರು 1,500 ರೈತ ದಂಪತಿಗಳಿಗೆ ಇದೇ ಮೊದಲ ಬಾರಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ. ನಂತರ ಕೃಷಿ ಸಚಿವರು ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.
ನವದೆಹಲಿ: ಪ್ರತಿ ವರ್ಷ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತ ದಂಪತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.
ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಈ ಬಾರಿ 1,500 ರೈತ ದಂಪತಿಗಳನ್ನು ದೇಶದ ವಿವಿಧ ಭಾಗಗಳಿಂದ ಆರಿಸಿ ಆಹ್ವಾನ ನೀಡಲಾಗಿದೆ.
ಇದರಲ್ಲಿ ವಿವಿಧ ರೈತ ಉತ್ಪಾದಕರ ಸಂಘದ ಪ್ರತಿನಿಧಿಗಳು ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಮತ್ತು ಸರ್ಕಾರದ ವಿವಿಧ ಸಣ್ಣ ನೀರಾವರಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ಇವರಿಗೆ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಕಾರ್ಯಕ್ರಮದ ನಂತರ ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.
ಕಳೆದ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೂ 500 ರೈತರನ್ನು ವಿಶೇಷ ಆಹ್ವಾನಿತರಾಗಿ ಆಯ್ಕೆ ಮಾಡಲಾಗಿತ್ತು.