ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ದಾಳಿ ಮಾಡಿ ಹೊಣೆ ಹೊತ್ತಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ದಾಳಿ ಮಾಡಿ ಹೊಣೆ ಹೊತ್ತಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ಏ.14ರಂದು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್‌ ನಿವಾಸದ ಮೇಲೆ 4 ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯನ್ನು ತಾವೇ ಮಾಡಿಸಿದ್ದಾಗಿ ಅನ್ಮೋಲ್‌ ಬಿಷ್ಣೋಯಿ ಹೇಳಿಕೊಂಡಿದ್ದ. 

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಈತನ ಅನ್ಮೋಲ್ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ಈತನ ಸೋದರ ಲಾರೆನ್ಸ್‌ ಈಗಾಗಲೇ ಗುಜರಾತ್‌ನ ಜೈಲಿನಲ್ಲಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.