ಸಾರಾಂಶ
ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.
ನವದೆಹಲಿ: ಕುರುಕುಲು ತಿಂಡಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.
ಇತ್ತೀಚೆಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಹೀಗಾಗಿ ಪ್ಯಾಕೇಜ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಇನ್ನು ಮೇಲೆ ಆ ಆಹಾರ ಪದಾರ್ಥದಲ್ಲಿರುವ ಒಟ್ಟು ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನಾಂಶದ ಬಗ್ಗೆ ದಪ್ಪ ಅಕ್ಷರಗಳಲ್ಲಿ ನಮೂದಿಸುವುದು ಕಡ್ಡಾಯವಾಗಲಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2020ರ ನಿಯಮಕ್ಕೆ ಪ್ರಾಧಿಕಾರ ತಿದ್ದಪಡಿ ಮಾಡಿದೆ.ಈ ತಿದ್ದುಪಡಿ ಗ್ರಾಹಕರು ಸೇವಿಸುವ ಉತ್ಪನ್ನದ ಪೌಷ್ಠಿಕಾಂಶ ಮೌಲ್ಯವನ್ನು ಅರ್ಥ ಮಾಡಿಕೊಳ್ಳಲು. ಸರಿಯಾದ ಆಹಾರ ಕ್ರಮವನ್ನು ತೆಗೆದುಕೊಳ್ಳಲು ಸಹಾಯಕಾರಿ ಎಂದು ಇಲಾಖೆ ಹೇಳಿದೆ. ಹೆಚ್ಚಿನ ಪ್ರಮಾಣದ ಸಕ್ಕರೆ,ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನಾಂಶ ಸೇವನೆಯಿಂದ ಆಗಬಹುದಾದ ಅನಾಹುತವನ್ನು ತಡೆಯಲು ಈ ಹೆಜ್ಜೆಯಿಟ್ಟಿದೆ.