ಸಾರಾಂಶ
ಮತ ಎಣಿಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸ್ಪಷ್ಟತೆ ಮತ್ತು ಪಾರದರ್ಶಕತೆ ತರುವ ಉದ್ದೇಶದಿಂದ ಚುನಾವಣಾ ಆಯೋಗವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ತಂದಿದೆ.
ನವದೆಹಲಿ: ಮತ ಎಣಿಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸ್ಪಷ್ಟತೆ ಮತ್ತು ಪಾರದರ್ಶಕತೆ ತರುವ ಉದ್ದೇಶದಿಂದ ಚುನಾವಣಾ ಆಯೋಗವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ತಂದಿದೆ.
ಇದುವರೆಗೆ ಎಣಿಕೆಯ ದಿನದಂದು, ಅಂಚೆ ಮತಪತ್ರಗಳ ಎಣಿಕೆ ಬೆಳಿಗ್ಗೆ 8ಕ್ಕೆ ಮತ್ತು ಇವಿಎಂ ಮತಗಳ ಎಣಿಕೆ ಬೆಳಿಗ್ಗೆ 8:30ಕ್ಕೆ ಪ್ರಾರಂಭವಾಗುತ್ತಿತ್ತು. ಅಂಚೆ ಮತಗಳ ಎಣಿಕೆಯನ್ನು ಲೆಕ್ಕಿಸದೆ ಇವಿಎಂ ಎಣಿಕೆ ಮುಂದುವರಿಯುತ್ತಿತ್ತು. ಅಂಚೆ ಎಣಿಕೆ ಪೂರ್ಣಗೊಳ್ಳುವ ಮೊದಲೇ ಇವಿಎಂ ಎಣಿಕೆ ಪೂರ್ಣಗೊಳಿಸಬಹುದಾಗಿತ್ತು. ಆದರೆ ಈಗ ಆಯೋಗವು ಇವಿಎಂ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಪೂರ್ಣಗೊಳಿಸಲು ನಿರ್ಧರಿಸಿದೆ. ಅಂತಿಮ ಸುತ್ತಿನ ಇವಿಎಂ ಎಣಿಕೆ ಕೈಗೊಳ್ಳುವ ಮುನ್ನವೇ ಅಂಚೆ ಮತಪತ್ರಗಳ ಎಣಿಕೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ನಿಯಮ ಮೊದಲು ಜಾರಿಗೆ ಬರಲಿದೆ.