ಸಾರಾಂಶ
ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.
ಕೊಲ್ಕತ್ತಾ: ಎರಡು ದಿನಗಳ ಹಿಂದೆ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿದ್ದ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.
ಇಲ್ಲಿನ ಸಾಲ್ಟ್ ಲೇಕ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ಅಭಿಜಿತ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ, ‘ಇಂದು, ನಾನು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದೇನೆ. ಬಿಜೆಪಿ ಪಕ್ಷ ಸೇರಲು ನನಗೆ ಸಂತೋಷವಾಗಿದೆ. ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಏಳಿಗೆಗೆ ಸದಾ ಶ್ರಮಿಸಲು ಸಿದ್ಧನಾಗಿದ್ದೇನೆ. ಭ್ರಷ್ಟ ಟಿಎಂಸಿ ಆಡಳಿತವನ್ನು ರಾಜ್ಯದಿಂದ ಕಿತ್ತೊಗೆಯುವುದು ನಮ್ಮ ಮುಖ್ಯ ಉದ್ದೇಶ " ಎಂದು ಹೇಳಿದರು.
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ಪಶ್ಚಿಮ ಬಂಗಾಳದ ರಾಜಕೀಯಕ್ಕೆ ಅಭಿಜಿತ್ ಗಂಗೋಪಾಧ್ಯಾಯ ಅಂತಹ ವ್ಯಕ್ತಿಗಳ ಅಗತ್ಯವಿದೆ ಎಂದರು.