ಸಾರಾಂಶ
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಮುಂದೂಡಲ್ಪಟ್ಟ ಹಿನ್ನೆಲೆ ಪಾಕ್‌ನಿಂದ ತೆರಳುತ್ತಿದ್ದ ಆಸ್ಟ್ರೇಲಿಯಾದ ನಾಲ್ವರು ಕ್ರಿಕೆಟಿಗರು ನೂರ್ ಖಾನ್ ವಾಯುನೆಲೆ ಮೇಲೆ ಭಾರತ ನಡೆಸಿದ್ದ ಕ್ಷಿಪಣಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದ ವಿಷಯ ಬೆಳಕಿಗೆ ಬಂದಿದೆ.
ಕರಾಚಿ: ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಮುಂದೂಡಲ್ಪಟ್ಟ ಹಿನ್ನೆಲೆ ಪಾಕ್‌ನಿಂದ ತೆರಳುತ್ತಿದ್ದ ಆಸ್ಟ್ರೇಲಿಯಾದ ನಾಲ್ವರು ಕ್ರಿಕೆಟಿಗರು ನೂರ್ ಖಾನ್ ವಾಯುನೆಲೆ ಮೇಲೆ ಭಾರತ ನಡೆಸಿದ್ದ ಕ್ಷಿಪಣಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದ ವಿಷಯ ಬೆಳಕಿಗೆ ಬಂದಿದೆ.
ಶನಿವಾರ ಭಾರತವು ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಸೇರಿದಂತೆ ಮೂರು ಪಾಕಿಸ್ತಾನಿ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಗೂ ಮುಂಚೆ ನೂರ್ ಖಾನ್ ವಾಯುನೆಲೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಶಾನ್ ಅಬಾಟ್, ಬೆನ್ ದ್ವಾರಶುಯಿಸ್, ಆ್ಯಸ್ಟನ್ ಟರ್ನರ್ ಮತ್ತು ಮಿಚ್ ಓವನ್ ಮತ್ತು ಅಧಿಕಾರಿಗಳಿದ್ದರು.
ಭಾರತದ ಕ್ಷಿಪಣಿ ದಾಳಿ ನಡೆಸುವ ಮೂರು ಗಂಟೆಗೂ ಮುನ್ನ ಪಿಎಸ್‌ಎಲ್ ಮುಂದೂಡಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವ್ಯವಸ್ಥೆ ಮಾಡಿದ್ದ ವಿಮಾನದಲ್ಲಿ ದುಬೈಗೆ ತೆರಳಿದ್ದು, ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ. ಈ ಬಗ್ಗೆ ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ.