ಇಲ್ಲಿನ ಭಾರತೀಯ ಸಮುದಾಯ ಕೇಂದ್ರದ ಆವರಣದಲ್ಲಿದ್ದ ಮಹಾತ್ಮ ಗಾಂಧಿಯವರ ಕಂಚಿನ ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ಕಳ್ಳತನ ಮಾಡಿದ ಘಟನೆ ಸೋಮವಾರ ನಡೆದಿದೆ. ಇದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಡಿಸಿದ್ದು, ಪುತ್ಥಳಿಯನ್ನು ಪುನಃ ಪ್ರತಿಷ್ಟಾಪಿಸಿ, ಆರೋಪಿಗಳನ್ನು ಹೆಡೆಮುರಿ ಕಟ್ಟುವಂತೆ ಆಸ್ಟ್ರೇಲಿಯಾ ಸರ್ಕಾರಕ್ಕೆ ಆಗ್ರಹಿಸಿದೆ.
-ಪಾದವನ್ನಷ್ಟೇ ಉಳಿಸಿ ಪರಾರಿ । ದುಷ್ಕೃತ್ಯಕ್ಕೆ ಭಾರತ ಖಂಡನೆ
ಮೆಲ್ಬರ್ನ್: ಇಲ್ಲಿನ ಭಾರತೀಯ ಸಮುದಾಯ ಕೇಂದ್ರದ ಆವರಣದಲ್ಲಿದ್ದ ಮಹಾತ್ಮ ಗಾಂಧಿಯವರ ಕಂಚಿನ ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ಕಳ್ಳತನ ಮಾಡಿದ ಘಟನೆ ಸೋಮವಾರ ನಡೆದಿದೆ. ಇದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಡಿಸಿದ್ದು, ಪುತ್ಥಳಿಯನ್ನು ಪುನಃ ಪ್ರತಿಷ್ಟಾಪಿಸಿ, ಆರೋಪಿಗಳನ್ನು ಹೆಡೆಮುರಿ ಕಟ್ಟುವಂತೆ ಆಸ್ಟ್ರೇಲಿಯಾ ಸರ್ಕಾರಕ್ಕೆ ಆಗ್ರಹಿಸಿದೆ.426 ಕೆ.ಜಿ ತೂಕದ ಪ್ರತಿಮೆಯನ್ನು ಕತ್ತರಿಸಿರುವ ದುಷ್ಕರ್ಮಿಗಳು, ಪಾದವನ್ನಷ್ಟೇ ಉಳಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿರುವ ಆಸ್ಟ್ರೇಲಿಯಾ ಪೊಲೀಸರು, ಯಾವುದೇ ವ್ಯಕ್ತಿ ಕದ್ದ ಕಂಚನ್ನು ಮಾರಲು ಬಂದರೆ ಎಚ್ಚರದಿಂದಿರುವಂತೆ ಲೋಹದ ವ್ಯಾಪಾರಿಗಳಿಗೆ ಎಚ್ಚರಿಸಿದೆ.
ಪ್ರತಿಮೆಯನ್ನು ನವದೆಹಲಿಯಲ್ಲಿರುವ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ಐಸಿಸಿಆರ್) ಉಡುಗೊರೆಯಾಗಿ ನೀಡಿದ್ದು ವಿಶೇಷ.===ಭಾರತ ಖಂಡನೆ:ಘಟನೆಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಖಂಡಿಸಿದ್ದಾರೆ. ‘ಈ ವಿಷಯವನ್ನು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಬಲವಾಗಿ ಪ್ರಸ್ತಾಪಿಸಿದ್ದೇವೆ. ಪ್ರತಿಮೆಯನ್ನು ಮರುಸ್ಥಾಪಿಸಿ, ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ’ ಎಂದು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.