ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿ ಅವರ ಬರ್ತ್​​ಡೇ ಪಾರ್ಟಿ ಮೇಲೆ ಮಂಗಳವಾರ ರಾತ್ರಿ ತೆಲಂಗಾಣ ಪೊಲೀಸರು ದಾಳಿ ನಡೆಸಿದ್ದು, ಗಾಂಜಾ ಹಾಗೂ ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.  

ಹೈದರಾಬಾದ್‌: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿ ಅವರ ಬರ್ತ್​​ಡೇ ಪಾರ್ಟಿ ಮೇಲೆ ಮಂಗಳವಾರ ರಾತ್ರಿ ತೆಲಂಗಾಣ ಪೊಲೀಸರು ದಾಳಿ ನಡೆಸಿದ್ದು, ಗಾಂಜಾ ಹಾಗೂ ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪೂರ್ವಾನುಮತಿ ಇಲ್ಲದೆ ಪಾರ್ಟಿ ಆಯೋಜನೆ ಮತ್ತು ಲೈಸೆನ್ಸ್ ಇಲ್ಲದೆ ವಿದೇಶಿ ಮದ್ಯ ಆಮದಿಗಾಗಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲಾಗಿದೆ.

ಹೈದರಾಬಾದ್ ಹೊರವಲಯದ ತ್ರಿಪುರಾ ರೆಸಾರ್ಟ್‌ನಲ್ಲಿ ಮಂಗ್ಲಿ ಬರ್ತ್​ಡೇ ಪಾರ್ಟಿ ನಡೆಯುತ್ತಿತ್ತು. ಮಾದಕ ವಸ್ತು ಬಳಕೆ ಕುರಿತು ಅಧಿಕೃತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ, ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 9 ಜನ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಪೊಲೀಸರಿಗೆ ಮಂಗ್ಲಿ ಆವಾಜ್!: ದಾಳಿ ವೇಳೆ ಪೊಲೀಸರೊಬ್ಬರು ಪಾರ್ಟಿಯ ವಿಡಿಯೋ ಮಾಡುತ್ತಿದ್ದರು. ಆಗ ಮಂಗ್ಲಿ ವಿಡಿಯೋ ಮಾಡುವುದನ್ನು ನಿಲ್ಲಿಸುವಂತೆ ಆವಾಜ್ ಹಾಕಿದ್ದಾರೆ. ಇದಕ್ಕೆ ನನ್ನ ಕೆಲಸ ನಾನು ಮಾಡ್ತಿದ್ದೇನೆ ಎಂದು ಪೊಲೀಸ್ ಸಿಬ್ಬಂದಿ ಉತ್ತರಿಸಿದ್ದಾರೆ.