ಸಾರಾಂಶ
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನದಲ್ಲಿ ಪಾಕ್ ಭಾರಿ ಹಿನ್ನಡೆ ಅನುಭವಿಸಿದ್ದರೂ, ಪಾಕಿಸ್ತಾನ ಸರ್ಕಾರವು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ದೇಶದ ಅತ್ಯುನ್ನತ ಮಿಲಿಟರಿ ಶ್ರೇಣಿ ಆಗಿರುವ ಫೀಲ್ಡ್ ಮಾರ್ಷಲ್ ರ್‍ಯಾಂಕ್ ದಯಪಾಲಿಸಿದೆ.
- ಯುದ್ಧದಲ್ಲಿ ಹಿನ್ನಡೆ ಆದರೂ ಸೇನೆಯ ಅತ್ಯುಚ್ಚ ಶ್ರೇಣಿ
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನದಲ್ಲಿ ಪಾಕ್ ಭಾರಿ ಹಿನ್ನಡೆ ಅನುಭವಿಸಿದ್ದರೂ, ಪಾಕಿಸ್ತಾನ ಸರ್ಕಾರವು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ದೇಶದ ಅತ್ಯುನ್ನತ ಮಿಲಿಟರಿ ಶ್ರೇಣಿ ಆಗಿರುವ ಫೀಲ್ಡ್ ಮಾರ್ಷಲ್ ರ್‍ಯಾಂಕ್ ದಯಪಾಲಿಸಿದೆ.ಈ ಬಗ್ಗೆ ಪಾಕಿಸ್ತಾನ ಪ್ರಧಾನಿ ಮಂತ್ರಿ ಕಾರ್ಯಾಲಯ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ‘ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಪದೋನ್ನತಿ ನೀಡಲಾಗಿದೆ. ಈ ಪ್ರಸ್ತಾಪಕ್ಕೆ ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮತಿ ದೊರೆತಿದೆ’ ಎಂದಿದೆ,‘ಭಾರತದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸಶಸ್ತ್ರ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಕಾರಣಕ್ಕೆ ಅವರಿಗೆ ಪದೋನ್ನತಿ ನೀಡಲಾಗಿದೆ. ಅವರ ಅನುಕರಣೀಯ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ’ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.