ಸಾರಾಂಶ
ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ.
ಗಿರಿದಿಹ್: ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಭಾರೀ ಮಳೆಗೆ ಕಾಮಗಾರಿ ಪ್ರಗತಿಯಲ್ಲಿದ್ದ ಸೇತುವೆಯ ಗರ್ಡರ್ ಕುಸಿದು ಮತ್ತು ಪಿಲ್ಲರ್ ವಾಲಿ ಈ ಘಟನೆ ಸಂಭವಿಸಿದೆ.
ಸುಮಾರು 5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ. ರಾಂಚಿಯಿಂದ ಸುಮಾರು 235 ಕಿಮೀ ದೂರದಲ್ಲಿರುವ ಡಿಯೋರಿ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಡುಮ್ರತೋಲಾ ಮತ್ತು ಕರಿಪಾರ್ಹಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಫತೇಪುರ್ ಮತ್ತು ಭೇಲ್ವಾಗತಿ ನಡುವೆ ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ದುರಂತದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ.‘ಭಾರೀ ಮಳೆಗೆ ಸೇತುವೆ ಕುಸಿದಿದೆ.‘ಗರ್ಡರ್ ಕುಸಿದು ಪಿಲ್ಲರ್ ವಾಲಿದೆ. ಸೇತುವೆಯನ್ನು ಮರು ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ತಿಳಿಸಲಾಗುವುದು’ ಎಂದು ಗಿರಿದಿಹ್ ರಸ್ತೆ ನಿರ್ಮಾಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ತಿಳಿಸಿದ್ದಾರೆ.