ಸಾರಾಂಶ
ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ವೊಂದಕ್ಕೆ ಇಂದು ಬೆಳಿಗ್ಗೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದೆ. ಈ ಘಟನೆ ರೈಲು ಸಂಚಾರದಲ್ಲಿ ಭಾರೀ ಅಡಚಣೆಯನ್ನುಂಟು ಮಾಡಿದ್ದು, ಕಚೇರಿ ವ್ಯವಹಾರಗಳು, ವ್ಯಾಪಾರೋದ್ಯಮ ಹಾಗೂ ಸಾಮಾನ್ಯ ಪ್ರಯಾಣಿಕರು ಪರದಾಡುತ್ತಿದ್ದಾರೆ.
ತಿರುವಳ್ಳೂರು : ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ವೊಂದಕ್ಕೆ ಇಂದು ಬೆಳಿಗ್ಗೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದೆ. ಈ ಘಟನೆ ರೈಲು ಸಂಚಾರದಲ್ಲಿ ಭಾರೀ ಅಡಚಣೆಯನ್ನುಂಟು ಮಾಡಿದ್ದು, ಕಚೇರಿ ವ್ಯವಹಾರಗಳು, ವ್ಯಾಪಾರೋದ್ಯಮ ಹಾಗೂ ಸಾಮಾನ್ಯ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಚೆನ್ನೈನಿಂದ ಬೆಂಗಳೂರಿಗೆ ಇಂಧನವನ್ನು ಸಾಗಿಸುತ್ತಿದ್ದ ರೈಲು ಈ ಅಪಘಾತಕ್ಕೆ ಒಳಗಾಗಿದೆ. ಬೆಳಿಗ್ಗೆ ಜಾವ ಈ ಘಟನೆ ಬೆಳಕಿಗೆ ಬಂದಿದ್ದು, ಟ್ಯಾಂಕರ್‌ಗೂ ರೈಲು ಹಳಿಗಳಿಗೂ ದಟ್ಟ ಹೊಗೆ ಹರಡುತ್ತಿರುವ ದೃಶ್ಯಗಳು ಕಂಡುಬಂದಿವೆ. 18 ತೈಲ ಟ್ಯಾಂಕರ್ ಅಗ್ನಿಗೆ ಆಹುತಿಯಾಗಿವೆ. ಈ ವೇಳೆ ಟ್ಯಾಂಕರ್‌ನಲ್ಲಿದ್ದ 12.6 ಲಕ್ಷ ಲೀಟರ್ ಡೀಸೆಲ್ ಸುಟ್ಟು ಭಸ್ಮವಾಗಿದ್ದು, 12 ಕೋಟಿ ರು.ನಷ್ಟವಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವಾಗಿಲ್ಲ.
ಬೆಂಕಿಯ ಮೂಲ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಭದ್ರತಾ ಕ್ರಮವಾಗಿ ದಕ್ಷಿಣ ರೈಲ್ವೆ ಕೆಲ ಪ್ರಮುಖ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.