ಸೇನಾ ಕಾರ್ಯಾಚರಣೆ ನೇರಪ್ರಸಾರ ಬೇಡ : ಕೇಂದ್ರ ಸಲಹೆ

| N/A | Published : Apr 27 2025, 01:51 AM IST / Updated: Apr 27 2025, 06:57 AM IST

ಸಾರಾಂಶ

ಪಹಲ್ಗಾಂ ದಾಳಿಯ ಉಗ್ರಗಾಮಿಗಳನ್ನು ಸೆರೆ ಹಿಡಿಯಲು ಭಾರತೀಯ ಸೇನೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಸೇನಾ ಕಾರ್ಯಾಚರಣೆ ಮತ್ತು ಚಲನವಲನಗಳನ್ನು ನೇರ ಪ್ರಸಾರ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಸಲಹೆ ನೀಡಿದೆ.

ನವದೆಹಲಿ: ಪಹಲ್ಗಾಂ ದಾಳಿಯ ಉಗ್ರಗಾಮಿಗಳನ್ನು ಸೆರೆ ಹಿಡಿಯಲು ಭಾರತೀಯ ಸೇನೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಸೇನಾ ಕಾರ್ಯಾಚರಣೆ ಮತ್ತು ಚಲನವಲನಗಳನ್ನು ನೇರ ಪ್ರಸಾರ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಸಲಹೆ ನೀಡಿದೆ. 

‘ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸುದ್ದಿ ಮಾಧ್ಯಮಗಳು, ಸಾಮಾಜಿಕ ಜಾಲತಾಣ ಬಳಕೆದಾರರು ನಿಮ್ಮ ಹೊಣೆಗಾರಿಕೆಯನ್ನು ಅರಿತುಕೊಳ್ಳಿ. ಸೂಕ್ಷ್ಮ ಮಾಹಿತಿಗಳನ್ನು ಬಹಿರಂಗಗೊಳಿಸಿದರೆ ಶತ್ರುಗಳು ಎಚ್ಚೆತ್ತುಕೊಳ್ಳುತ್ತಾರೆ. 

ಇದರಿಂದ ಕಾರ್ಯಾಚರಣೆಗೆ ನಿರೀಕ್ಷಿತ ಫಲ ದೊರಕದು. ಭದ್ರತಾ ಸಿಬ್ಬಂದಿಗಳಿಗೂ ತೊಂದರೆಯಾಗಬಹುದು. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ತಿದ್ದುಪಡಿ) ನಿಯಮಗಳು-2021ರ ಪ್ರಕಾರ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ನೇರ ಪ್ರಸಾರ ಶಿಕ್ಷಾರ್ಹ ಅಪರಾಧ’ ಎಂದು ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ ತಿಳಿಸಿದೆ.