ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿ ಸಾವಿರಾರು ಪ್ರಯಾಣಿಕರು ಪರದಾಡುತ್ತಿರುವ ನಡುವೆಯೇ, ರದ್ದಾದ ವಿಮಾನಗಳ ಟಿಕೆಟ್ ಮೊತ್ತವನ್ನು ಭಾನುವಾರ ಸಂಜೆಯೊಳಗೆ ಗ್ರಾಹಕರಿಗೆ ಮರುಪಾವತಿ ಮಾಡಬೇಕು ಮತ್ತು ಮುಂದಿನ 2 ದಿನಗಳಲ್ಲಿ ಅವರವರ ಬ್ಯಾಗ್‌ಗಳನ್ನು ಸುರಕ್ಷಿತವಾಗಿ ತಲುಪಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಇಂಡಿಗೋ ಏರ್‌ಲೈನ್ಸ್‌ಗೆ ನಿರ್ದೇಶಿಸಿದೆ.
-48 ಗಂಟೆಯಲ್ಲಿ ಪ್ರಯಾಣಿಕರ ಬ್ಯಾಗ್ ತಲುಪಿಸಲು ಸೂಚನೆ-ಪ್ರಯಾಣಿಕರ ಅಗತ್ಯ ನೆರವಿಗಾಗಿ ವಿಶೇಷ ತಂಡ ರಚನೆ ಪಿಟಿಐ ನವದೆಹಲಿ
ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿ ಸಾವಿರಾರು ಪ್ರಯಾಣಿಕರು ಪರದಾಡುತ್ತಿರುವ ನಡುವೆಯೇ, ರದ್ದಾದ ವಿಮಾನಗಳ ಟಿಕೆಟ್ ಮೊತ್ತವನ್ನು ಭಾನುವಾರ ಸಂಜೆಯೊಳಗೆ ಗ್ರಾಹಕರಿಗೆ ಮರುಪಾವತಿ ಮಾಡಬೇಕು ಮತ್ತು ಮುಂದಿನ 2 ದಿನಗಳಲ್ಲಿ ಅವರವರ ಬ್ಯಾಗ್‌ಗಳನ್ನು ಸುರಕ್ಷಿತವಾಗಿ ತಲುಪಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಇಂಡಿಗೋ ಏರ್‌ಲೈನ್ಸ್‌ಗೆ ನಿರ್ದೇಶಿಸಿದೆ. ಪೈಲಟ್‌ಗಳ ಕೊರತೆಯಿಂದ ಶನಿವಾರವೂ 400ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದಾಯಿತು. ಈ ಹಿನ್ನೆಲೆ ಸೂಚನೆ ನೀಡಿರುವ ಸಚಿವಾಲಯ, ‘ರದ್ದಾದ ಅಥವಾ ವಿಳಂಬವಾದ ವಿಮಾನಗಳ ಟಿಕೆಟ್ ಮೊತ್ತ ಮರುಪಾವತಿ ಪ್ರಕ್ರಿಯೆಯನ್ನು ಭಾನುವಾರ ರಾತ್ರಿ 8 ಗಂಟೆಯೊಳಗೆ ಪೂರ್ಣಗೊಳಿಸಬೇಕು. ಮರು ಟಿಕೆಟ್ ಬುಕಿಂಗ್ ಮಾಡುವಾಗ ಯಾವುದೇ ಶುಲ್ಕ ವಿಧಿಸಬಾರದು. ಮುಂದಿನ 48 ಗಂಟೆಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಅವರಿಗೆ ತಲುಪಿಸಬೇಕು. ಪ್ರಯಾಣಿಕರ ಸಹಾಯಕ್ಕಾಗಿಯೇ ತಂಡವೊಂದನ್ನು ರಚಿಸಬೇಕು. ಅವರು ಪ್ರಯಾಣಿಕರಿಗೆ ಮರುಪಾವತಿ, ಪರ್ಯಾಯ ಪ್ರಯಾಣ ವ್ಯವಸ್ಥೆ ಇತ್ಯಾದಿ ಅಗತ್ಯ ನೆರವು ಕಲ್ಪಿಸಬೇಕು’ ಎಂದಿದೆ.