ಸಾರಾಂಶ
ನವದೆಹಲಿ: ಭಯೋತ್ಪಾದನಾ ಸಂಘಟನೆಯಾದ ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲಿನ ನಿಷೇಧವನ್ನು ಮತ್ತೆ 5 ವರ್ಷ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ.ಈ ಕುರಿತು ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಉಗ್ರವಾದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶೂನ್ಯ ಸಹಿಷ್ಣುತೆ ನೀತಿ ಅನ್ವಯ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅನ್ವಯ ಸಿಮಿ ಸಂಘಟನೆಯನ್ನು ಇನ್ನೂ 5 ವರ್ಷಗಳ ಕಾಲ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.ಸಿಮಿ ಸಂಘಟನೆ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ, ಶಾಂತಿ ಕದಡುವ ಮತ್ತು ಕೋಮು ಸೌಹಾರ್ಧತೆಗೆ, ದೇಶದ ಸಮಗ್ರತೆ, ಭದ್ರತೆ ಮತ್ತು ಏಕತೆಗೆ ಧಕ್ಕೆ ತರುವ ಯತ್ನ ಮಾಡುತ್ತಿದೆ ಎಂದು ಶಾ ಹೇಳಿದ್ದಾರೆ.2001ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ವೇಳೆ ಮೊದಲ ಬಾರಿಗೆ ಸಿಮಿ ಸಂಘಟನೆ ನಿಷೇಧಿಸಲಾಗಿತ್ತು. ನಂತರ ಅದನ್ನು ತಲಾ 5 ವರ್ಷಗಳಂತೆ ವಿಸ್ತರಿಸಿಕೊಂಡು ಬರಲಾಗಿದೆ.