ಸಾರಾಂಶ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲಿಗೆ ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲಿಗೆ ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಗಡ್ಕರಿ ‘ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್ ವಿತರಣೆಗೆ ಚಿಂತನೆ ನಡೆಸಿದ್ದೇವೆ. ಖಾಸಗಿ ವಾಹನಗಳು ಟೋಲ್ ಸಂಗ್ರಹದಲ್ಲಿ ಶೇ.26ರಷ್ಟು ಹೊಂದಿದೆ. ಹೀಗಾಗಿ ಯಾವುದೇ ನಷ್ಟ ಸಂಭವಿಸುವುದಿಲ್ಲ’ ಎಂದಿದ್ದಾರೆ.pಜೊತೆಗೆ ‘ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಟೋಲ್ ಸಂಗ್ರಹಣಾ ಬೂತ್‌ನ್ನು ಹಳ್ಳಿಗಳ ಹೊರಗೆ ಸ್ಥಾಪಿಸಲಾಗುವುದು. ಅಲ್ಲದೇ ಫಾಸ್ಟ್‌ಟ್ಯಾಗ್ ಜೊತೆಗೆ ಹೆಚ್ಚುವರಿ ಸೌಲಭ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಿಎನ್‌ಎಸ್‌ಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೆ ತರುವುದಾಗಿ ಹೇಳಿದ್ದಾರೆ.