ಸಾರಾಂಶ
ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ನವದೆಹಲಿ: ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬುಧವಾರ ಈ ಬಗ್ಗೆ ಮಾತನಾಡಿದ ಅವರು ‘ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಚಾಲಕರು ನಿಖರವಾದ ದೂರಕ್ಕೆ ಶುಲ್ಕ ನಿಗದಿಪಡಿಸುವ ಉದ್ದೇಶದಿಂದ ಈಗಿರುವ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಅಳವಡಿಸುವುದು ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು’ ಎಂದಿದ್ದಾರೆ.ಅಲ್ಲದೇ ಹೆದ್ದಾರಿಯಲ್ಲಿ ವಾಹನ ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆಯ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು) ಎರಡರ ಪ್ರಾಯೋಗಿಕ ಯೋಜನೆಗಳನ್ನು ನಡೆಸಲಾಗಿದೆ’ ಎಂದಿದ್ದಾರೆ.
ಇದೇ ವೇಳೆ, 1000 ಕಿ.ಮೀ.ಗಿಂತ ಕಮ್ಮಿ ಅಂತರದ ಹೈವೇಗಳನ್ನು ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ನಿರ್ಮಿಸಲು 1.5-2 ಲಕ್ಷ ಕೋಟಿ ರು. ವಿನಿಯೋಗಿಸಲಾಗುವುದು ಎಂದರು.